ನವದೆಹಲಿ: ಸುಪ್ರೀಂಕೋರ್ಟ್ ನ ಸಂವಿಧಾನ ಪೀಠ ರಾಮಮಂದಿರ-ಬಾಬ್ರಿ ಮಸೀದಿ ವಿವಾದದ ಕುರಿತು ಇಂದು ಪ್ರಕಟಿಸಲಿರುವ ತೀರ್ಪು ಯಾರೊಬ್ಬರ ಸೋಲು ಅಲ್ಲ, ಗೆಲುವು ಅಲ್ಲ. ತೀರ್ಪು ಏನೇ ಬಂದರೂ ದೇಶದ ಶಾಂತಿ, ಸುವ್ಯವಸ್ಥೆ ಮತ್ತು ಏಕತೆಗೆ ಧಕ್ಕೆಯುಂಟಾಗದAತೆ ಎಚ್ಚರವಹಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಸಂದೇಶ ಪೋಸ್ಟ್ ಮಾಡಿರುವ ಅವರು, ದೇಶದ ನ್ಯಾಯಾಂಗ ವ್ಯವಸ್ಥೆಯ ಗೌರವ-ಪ್ರತಿಷ್ಠೆಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜತೆಗೆ ದೇಶದಲ್ಲಿ ಶಾಂತಿ-ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಕ್ರಮ ಕೈಗೊಳ್ಳಲು ಎಲ್ಲ ಧರ್ಮಗಳ ಮುಖಂಡರು, ಸ್ವಾಮೀಜಿಗಳು ಸಕಾರಾತ್ಮಕ ಕ್ರಮ ಕೈಗೊಂಡಿದ್ದಾರೆ. ಇದಕ್ಕಾಗಿ ಅವರೆಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.