ನವದೆಹಲಿ: ಗೋವಾದಲ್ಲಿ ಈ ತಿಂಗಳ ೨೦ರಿಂದ ೨೮ರವರೆಗೆ ನಡೆಯಲಿರುವ ೫೦ನೇ ಭಾರತ-ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಖ್ಯಾತ ನಟ ರಜನಿಕಾಂತ್ ಅವರಿಗೆ 'ಐಕಾನ್ ಆಫ್ ಗೋಲ್ಡನ್ ಜುಬಿಲಿ ಆಫ್ ಐಎಫ್‌ಎಫ್‌ಐ' ಎಂಬ ವಿಶೇಷ ಪ್ರಶಸ್ತಿಯನ್ನು ಭಾರತ ಸರ್ಕಾರ ಶನಿವಾರ ಪ್ರಕಟಿಸಿದೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಈ ವಿಷಯ ತಿಳಿಸಿ, ಚಲನಚಿತ್ರರಂಗಕ್ಕೆ ನೀಡಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ರಜನಿಕಾಂತ್ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಪ್ರಸಿದ್ಧ ಫ್ರೆಂಚ್ ನಟಿ ಇಸಾಬೆಲ್ಲೆ ಹಪ್ಪರ್ಟ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ನಟಿ ೧೯೭೧ ರಲ್ಲಿ ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ ೧೨೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದು ತಿಳಿಸಿದರು.