ನವದೆಹಲಿ: ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ೨೦೧೮ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಶಬರಿಮಲೆಗೆ ಸಂಬAಧಿಸಿದAತೆ ಸೆಪ್ಚಂಬರ್ ೨೦೧೮ರಲ್ಲಿ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಅಥವಾ ಮಾರ್ಪಾಡು ಸೂಚಿಸಿಲ್ಲ, ಧಾರ್ಮಿಕ ಸ್ವಾತಂತ್ರ‍್ಯ ಮತ್ತು ವಯಕ್ತಿಕ ಸ್ವಾತಂತ್ರ‍್ಯದ ಸಂಘರ್ಷದ ವಿಚಾರ ಇರುವುದರಿಂದ ಇನ್ನಷ್ಟು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ ೭ ನ್ಯಾಯಮೂರ್ತಿಗಳಿರುವ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ.
ವಿಸ್ತೃತ ನ್ಯಾಯಪೀಠದ ವಿಚಾರಣೆ ಮುಗಿದು, ತೀರ್ಪು ಹೊರ ಬೀರುವವರೆಗೂ ಹಿಂದಿನ ತೀರ್ಪು ಊರ್ಜಿತದಲ್ಲಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಪೀಠ ಇಂದು ಹೇಳಿದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ ೧೦ರಿಂದ ೫೦ ವರ್ಷ ವಯಸ್ಸಿನ
ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ‍್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ ೨೦೧೮ ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದಿತ್ತು.