ಚೆನ್ನೆ: ಭಾರತದ ಚುನಾವಣಾ ವ್ಯವಸ್ಥೆಯ ಸುಧಾರಕ, ಕೇಂದ್ರ ಚುನಾವಣಾ ಆಯೊ?ಗದ ಮಾಜಿ ಮುಖ್ಯಆಯುಕ್ತ ಟಿ.ಎನ್.ಶೇಷನ್(೮೬) ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
೧೯೯೦ ಡಿ.೧೨ರಿಂದ ೧೯೯೬ ಡಿ.೧೧ರವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಶೇಷನ್ ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಎಂದೇ ಖ್ಯಾತಿ ಪಡೆದಿದ್ದರು. ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆ ಪ್ರಕ್ರಿಯೆಯಲ್ಲಿ ಇವರ ಕೊಡುಗೆ ಅಪಾರ. ಕೇರಳದ ಪಾಲಕ್ಕಾಡ್ ಜಿಲ್ಲೆಯ ತಿರುನೆಲ್ಲೆ ಯಲ್ಲಿ ೧೯೩೨ರ ಡಿ.೧೫ರಂದು ಜನಿಸಿದರು.
ಐಎಎಸ್ ಅಧಿಕಾರಿ ಶೇಷನ್ ಅವರನ್ನು ರಾಜೀವ್ ಗಾಂಧಿ ಸರ್ಕಾರ ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. ಬಳಿಕ ೧೯೮೯ರಲ್ಲಿ ಸಂಪುಟ ಕಾರ್ಯದರ್ಶಿಯಾಗಿ ಬಡ್ತಿ ಪಡೆದರು. ವಿ.ಪಿ.ಸಿಂಗ್ ಸರ್ಕಾರ ಇವರನ್ನು ಯೋಜನಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಕಳೆದ ಕೆಲವು ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಚುನಾವಣಾ ಸಂದರ್ಭದಲ್ಲಿನ ಅಭ್ಯರ್ಥಿಗಳ ದುಂದು ವೆಚ್ಚ, ವೋಟಿಗಾಗಿ ನೋಟು, ಮೀತಿ ಮೀರಿದ ಹಣ ವರ್ಗಾವಣೆಗೆ ಕಡಿವಾಣ ಹಾಕಿದ್ದರು. ಚುನಾವಣಾ ಸಂದರ್ಭಗಳಲ್ಲಿ ಎಲ್ಲೆಡೆ ಪ್ರಚಾರಕ್ಕಾಗಿ ಬಳಸುತ್ತಿದ್ದ ಬ್ಯಾನರ್, ಬಟ್ಟಿಂಗ್ಸ್, ಕಟೌಟ್ ಸಂಸ್ಕೃತಿಗೆ ಬ್ರೇಕ್ ಹಾಕಿದವರು ಶೇಷನ್. ಕೇರಳದ ಪಾಲಕ್ಕಾಡ್ ಜಿಲ್ಲೆಯ ತಿರುನೆಲ್ಲೈನಲ್ಲಿ ೧೯೩೨ರಲ್ಲಿ ಜನಿಸಿದ ಶೇಷನ್ ಅವರು ಭೌತಶಾಸ್ತ್ರದಲ್ಲಿ ಪದವಿ ಪಡೆದು ಕೆಲ ಕಾಲ ಮದ್ರಾಸ್ ಕ್ರೈಸ್ತ ಕಾಲೇಜಿನಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಐಎಎಸ್ ಪರೀಕ್ಷೆ ಬರೆದು ನಾಗರಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹಾರ್ವಡ್ ವಿವಿಯಲ್ಲಿ ಗಳಿಸಿದ್ದರು.