ನವದೆಹಲಿ : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಬಾಕಿ ಇರುವ ಅತ್ಯಾಚಾರ ಮತ್ತು ಪೆÇಕ್ಸೊ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ದೇಶಾದ್ಯಂತ 1,023 ವಿಶೇಷ ತ್ವರಿತ ನ್ಯಾಯಾಲಯಗಳನ್ನ ಸ್ಥಾಪಿಸಲು ನಿರ್ಧರಿಸಿದೆ.
ಇನ್ನೊಂದೆಡೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ, ಮಕ್ಕಳ ಅಪೌಷ್ಠಿಕತೆಯ ವಿರುದ್ಧ ಹೋರಾಟಕ್ಕೆ ಬಿಲ್ ಮತ್ತು ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹ ಅಧ್ಯಕ್ಷ ಬಿಲ್ ಗೇಟ್ಸ್ ಜೊತೆಗೆ 2019ರ ನ. 18ರಂದು ನವದೆಹಲಿಯಲ್ಲಿ ಭಾರತೀಯ ಪೆÇೀಷಣ್ ಕೃಷಿ ಕೋಶವನ್ನು ಸ್ಥಾಪಿಸಿದ್ದಾರೆ.ಕೇಂದ್ರ ಸರ್ಕಾರವು ರಾಜ್ಯಸರ್ಕಾರಗಳ ಸಲಹೆಯೊಂದಿಗೆ 1023 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಆದಷ್ಟು ಬೇಗ ಸ್ಥಾಪನೆ ಮಾಡಿ ಕಾರ್ಯಾಚರಿಸುವಂತೆ ಮಾಡಲು ನಿರ್ಧರಿಸಿದೆ. ಅದರಲ್ಲೂ ಪೆÇೀಸ್ಕೋ ತನಿಖೆಗಳನ್ನು ಕಠಿಣವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಈಗಾಗಲೇ 1023 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಪೈಕಿ 400 ಕೋರ್ಟುಗಳನ್ನು ಸ್ಥಾಪನೆ ಮಾಡಲು ರಾಜ್ಯಗಳೊಂದಿಗೆ ಒಮ್ಮತಕ್ಕೆ ಬರಲಾಗಿದೆ. ಈಗಾಗಲೇ ದೇಶದಾದ್ಯಂತ 704ಕ್ಕೂ ಅಧಿಕ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಕಾರ್ಯಾಚರಣೆ ನಡೆಸುತ್ತಿವೆ.