ನವದೆಹಲಿ: ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 43 ಮಂದಿ ಸಜೀವ ದಹನವಾಗಿದ್ದು ಈ ಸಂಬಂಧ ಅನಜ್ ಮಂಡಿ ಕಟ್ಟಡದ ಮಾಲೀಕನನ್ನು ಪೆÇಲೀಸರು ಬಂಧಿಸಿದ್ದಾರೆ.
ದೆಹಲಿ ಪೆÇಲೀಸರು ಅನಜ್ ಮಂಡಿ ಕಟ್ಟಡದ ಮಾಲೀಕ ರೆಹಾನ್ ಮತ್ತು ಆತನ ಮ್ಯಾನೇಜರ್ ಫುರ್ಕಾನ್ ಎಂಬಾತನನ್ನು ಪೆÇಲೀಸರು ಬಂಧಿಸಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 304 ಮತ್ತು 285 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಖಾನೆಯಲ್ಲಿ ಶಾಲಾ ಬ್ಯಾಗು, ಪ್ಲಾಸ್ಟಿಕ್ ಬಾಟಲ್ ಗಳನ್ನು ತಯಾರಿಸಲಾಗುತ್ತಿತ್ತು. ಬೆಂಕಿ ಹತ್ತಿಕೊಂಡಾಗ ವಸ್ತುಗಳಿಂದ ಹೊಗೆ ತುಂಬಿ ಉಸಿರುಗಟ್ಟಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಸಾಯಲು ಕಾರಣವಾಗಿದೆ. ಇನ್ನು ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಎಲ್ ಎನ್ ಜೆಪಿ ಮತ್ತು ಲೇಡಿ ಹದಿರ್ಂಜ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಶಾರ್ಟ್ ಸಕ್ರ್ಯೂಟ್ ಕಾರಣವಾಗಿರಬಹುದು: ಅಗ್ನಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಕಾರಣವಾಗಿರಬಹುದು ಎಂದು ತಕ್ಷಣಕ್ಕೆ ಕಂಡುಬರುತ್ತಿದ್ದು, ನಿಖರ ಕಾರಣ ತಿಳಿದುಬರಲು ತನಿಖೆಯ ಅಗತ್ಯವಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಹ ಹೇಳಿದ್ದಾರೆ. ಪ್ರಧಾನಿಯಿಂದ ಪರಿಹಾರ ಘೋಷಣೆ: ಪ್ರಾಣ ಕಳೆದುಕೊಂಡ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಸಹ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.