ಮುಳ್ಳೇರಿಯ : ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಮಾಸಿಕ ಸಭೆಯು ಡಿ.8ರಂದು ಅಪರಾಹ್ನ 2.30ರಿಂದ ಅಡೂರು ಮಹಾಲಿಂಗೇಶ್ವರ ಕ್ಷೇತ್ರ ಪರಿಸರದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ನೂಜಿಬೆಟ್ಟು ವೆಂಕಟಕೃಷ್ಣ ಕಾರಂತ ವಹಿಸುವರು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಧ್ಯಕ್ಷೆ ಸತ್ಯಪ್ರೇಮಾ ಎಂ ಭಾರಿತ್ತಾಯ, ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಜತೆ ಕಾರ್ಯದರ್ಶಿ ಶ್ರೀಪ್ರಕಾಶ್ ಎ ಮೊದಲಾದವರು ಭಾಗವಹಿಸುವರು. ಅದೇ ರೀತಿ ಡಿಸೆಂಬರ್ 7ರಂದು ಸಂಜೆ 6.30ರಿಂದ ಅಡೂರು ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಸಮುದಾಯದ ವತಿಯಿಂದ ಸಹಸ್ರನಾಮ ಪಾರಾಯಣ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಬಂಧಪಟ್ಟವರು ವಿನಂತಿಸಿದ್ದಾರೆ.