ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತಿ ಮಟ್ಟದ ಕೇರಳೋತ್ಸವ ಮಂಗಳವಾರ ಆರಂಭಗೊಂಡಿತು. ಗ್ರಾಮಪಂಚಾಯತಿ ಕಿರು ಕ್ರೀಡಾಂಗಣದಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಶಾಸಕ ಎಂ.ಸಿ.ಕಮರುದ್ದೀನ್ ಕೇರಳೋತ್ಸವವನ್ನು ಉದ್ಘಾಟಿಸಿದರು. ಬ್ಲಾಕ್ ಪಂಚಾಯತಿ ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಗ್ರಾಮಪಂಚಾಯತಿ ಅಧ್ಯಕ್ಷ ಅಬ್ದುಲ್ ಅಝೀಝ್ ಹಾಜಿ ಮುಖ್ಯ ಅತಿಥಿಯಾಗಿದ್ದರು. ಬ್ಲಾಕ್ ಪಂಚಾಯತಿ ಉಪಾಧ್ಯಕ್ಷೆ ಮಮತಾ ದಿವಾಕರ್, ಅಭಿವೃದ್ದಿ ಸ್ಥಾಯೀ ಸಮಿತಿ ಅಧ್ಯಕ್ಷೆ ಫಾತಿಮತ್ ಸುಹರಾ ಮಾಗೋಡಿ, ಆರೋಗ್ಯ-ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಮುಸ್ತಫಾ ಉದ್ಯಾವರ, ಸದಸ್ಯರಾದ ಸಾಯಿರಾಬಾನು, ಮಿಸ್ಬಾನಾ, ಹಸೀನಾ ಮಂಜೇಶ್ವರ, ಕಾರ್ಯದರ್ಶಿ ಎನ್.ಸುರೇಂದ್ರನ್, ಜನರಲ್ ವಿಸ್ತರಣಾ ಅಧಿಕಾರಿ ಎಂ.ಎಂ.ಮಧು, ಮಂಜೇಶ್ವರ ಗ್ರಾಮಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಎಂ.ಕೆ. ಅಬ್ದುಲ್ ರಹಮಾನ್ ಹಾಜಿ, ಸಾಮಾಜಿಕ ಕಾರ್ಯಕರ್ತ ಸೈಫುಲ್ಲ ತಂಙಳ್, ಹಮೀದ್ ಹೊಸಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಉಪ್ಪಳ ಮಣಂಗುಳಿ ಕ್ರೀಡಾಂಗಣದಲ್ಲಿ ಕ್ರಿಕೆಟ್, ಕುಂಜತ್ತೂರಿನ ತೂಮಿನಾಡ್ ಅರಬ್ ರೈಡರ್ಸ್ ಮೈದಾನದಲ್ಲಿ ಕಬಡ್ಡಿ ಪಂದ್ಯಾಟಗಳು ಬುಧವಾರ ಆರಂಭಗೊಂಡಿತು. ಗುರುವಾರ ಮಂಜೇಶ್ವರ ಗಿಳಿವಿಂಡು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಮಂದಿರ ಸಭಾಂಗಣದಲ್ಲಿ ಕಲಾ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು.