ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿ ತಲುಪಿದ್ದು, ಮಿದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.
ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದ ಕುರಿತಂತೆ ಮಣಿಪಾಲ ಆಸ್ಪತ್ರೆ ವೈದ್ಯಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿ ತಲುಪಿದ್ದು, ಮಿದುಳು ನಿಷ್ಕ್ರಿಯವಾಗಿದೆ ಎಂದು ಹೇಳಿದ್ದಾರೆ.
ಜೊತೆಗೆ ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಅವರಿಗೆ ಜೀವರಕ್ಷಕ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಒಂದೆಡೆ ವೈದ್ಯರು ಶ್ರೀಗಳ ಆರೋಗ್ಯ ಕುರಿತು ಘೋಷಣೆ ಮಾಡುತ್ತಿದ್ದಂತೆಯೇ ಇನ್ನೊಂದೆಡೆ ಕೃಷ್ಣ ಮಠದ ಆವರಣದಲ್ಲಿ ನೆರೆದಿದ್ದ ಅವರ ಭಕ್ತರ ಮುಖದಲ್ಲಿ ಆತಂಕ ಹೆಚ್ಚಾಯಿತು. ಶ್ರೀಗಳ ಆರೋಗ್ಯ ಶೀಘ್ರ ಚೇತರಿಸಿಕೊಳ್ಳಲಿ ಎಂದು ಭಕ್ತರು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಅತ್ತ ಮಠದಲ್ಲಿಯೂ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳಲಿ ಎಂದು ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.