ಉಪ್ಪಳ: ಬಾಳ್ಯೂರು ಶ್ರೀ ಅಯ್ಯಪ್ಪ ಭಜನಾ ಮಂದಿರದ 39 ನೇ ಶ್ರೀ ಸತ್ಯನಾರಾಯಣ ಪೂಜೆ ಹಾಗು 48 ಗಂಟೆಗಳ ಅಖಂಡ ಭಗವನ್ನಾಮ ಸಂಕೀರ್ತನೆ ಮತ್ತು ಮಂದಿರದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ನೂತನ ಭೋಜನ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಡಿ.6, 7 ಮತ್ತು 8 ರಂದು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ವಿವಿಧ ಭಜನಾ ಮಂಡಳಿಗಳಿಂದ ಭಗವನ್ನಾಮ ಸಂಕೀರ್ತನೆ, ಬ್ರಹ್ಮಶ್ರೀ ಬಾಲಕೃಷ್ಣ ಭಟ್ ದಡ್ಡಂಗಡಿ ಅವರ ಪೌರೋಹಿತ್ಯದಲ್ಲಿ 30 ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಪರಮ ಪೂಜನೀಯ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗು ಆಶೀರ್ವಚನ, ಅಭ್ಯಾಗತರ ಸಮ್ಮುಖದಲ್ಲಿ ಭೋಜನ ಶಾಲೆ ಲೋಕಾರ್ಪಣೆ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸೀತಾ ಪರಿತ್ಯಾಗ, ಜಾಂಬವತಿ ಕಲ್ಯಾಣ ಯಕ್ಷಗಾನ ಬಯಲಾಟ ಜರಗಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ.