ಕೊಚ್ಚಿನ್: ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವ ಅಯ್ಯಪ್ಪ ಸ್ವಾಮಿ ದೇಗುಲ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ತಡೆಯಲು ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಹೇಳಿದೆ.
ಇದಕ್ಕಾಗಿ ಈ ಹಿಂದೆಯೇ ಓಂಬುಡ್ಸ್ ಮನ್ ಕೂಡ ಜಾರಿಗೆ ತರಲಾಗಿತ್ತು. ನ್ಯಾಯಮೂರ್ತಿ ಪಿಆರ್ ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತ ಮಾಹಿತಿ ನೀಡಿದ್ದು, ದೇವಾಲಯದ ಆವರಣದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ, ಫೆÇೀಟೋ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ ಎಂದು ಹೇಳಿದ್ದಾರೆ.