ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್ ಬಗ್ಗೆ ಲಘುವಾಗಿ ಮಾತನಾಡಿದರೆ ಸಹಿಸುವುದಿಲ್ಲ. ಸಾವರ್ಕರ್ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮೈತ್ರಿ ಪಕ್ಷ ಕಾಂಗ್ರೆಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದೆ.
ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರೂ ಅವರನ್ನು ನಾವು ನಂಬುತ್ತೇವೆ. ಸಾವರ್ಕರ್ ಮಹಾರಾಷ್ಟ್ರಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ದೇವರು. ಸಾವರ್ಕರ್ ಹೆಸರು ರಾಷ್ಟ್ರದ ಹೆಮ್ಮೆ. ಸಾವರ್ಕರ್ ಅವರನ್ನು ಅಪಮಾನಿಸಬೇಡಿ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ರೇಪ್ ಇನ್ ಇಂಡಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ಷಮೆಯಾಚಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಇದನ್ನು ತಳ್ಳಿ ಹಾಕಿದ್ದ ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆದ ಭಾರತ್ ಬಚಾವೋ ರ್ಯಾಲಿಯಲ್ಲಿ ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ. ನಾನು ಸತ್ಯ ಹೇಳಿದ್ದು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು.