ಕಾಸರಗೋಡು: ಕನ್ನಡ ಪರ ಹೋರಾಟದಲ್ಲಿ ಮತ್ತು ಸಂಘಟನೆಯಲ್ಲಿ ಕ್ರಿಯಾಶೀಲ, ಸೃಜನಶೀಲ ಅಮೂಲ್ಯ ಸೇವೆಗಾಗಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರಿಗೆ ಬೆಂಗಳೂರಿನ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಸಂಸ್ಥೆಯು ಕರ್ನಾಟಕ ಮಾಧ್ಯಮ ಸಹಕಾರದೊಂದಿಗೆ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಮತ್ತು ಅಧ್ಯಕ್ಷ ಗಣೇಶ್ ಕಾಸರಗೋಡು ಅವರ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 67 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.