ಕಾಸರಗೋಡು: ಕನ್ನಡ ಚಿಂತನೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಕೃತಿ ಬಿಡುಗಡೆ ಸಮಾರಂಭ ಇಂದು(ಡಿಸೆಂಬರ್ 31) ಬೆಳಗ್ಗೆ 10ಕ್ಕೆ ಕಾಸರಗೋಡು ¸ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ, ಅಪೂರ್ವ ಕಲಾವಿದರು ಕಾಸರಗೋಡು ಸಂಸ್ಥೆಯ ಸಹಯೋಗದೊಂದಿಗೆ ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭ ಅನುಪಮಾ ಪ್ರಸಾದ್ ಅವರ ಕಾದಂಬರಿ, 'ಪಕ್ಕಿಹಳ್ಳದ ಹಾದಿಗುಂಟ' ಕೃತಿ ಬಿಡುಗಡೆ, ವಿಶೇಷೋಪನ್ಯಾಸ ಮತ್ತು ಕಾವ್ಯ ವಾಚನ ವ್ಯಾಖ್ಯಾನ ನಡೆಯಲಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪೆÇ್ರ. ಎನ್ ಎಂ. ತಳವಾರ ಅವರು ಕಾರ್ಯಕ್ರಮ ಉದ್ಘಾಟಿಸಿ, 'ಪಕ್ಕಿಹಳ್ಳದ ಹಾದಿಗುಂಟ' ಕೃತಿ ಬಿಡುಗಡೆ ಮಾಡುವರು.
ನಂತರ 'ಅಭಿಜಾತ ಕನ್ನಡ ಸಾಹಿತ್ಯ - ಸಂಶೋಧನೆಯ ಸಾಧ್ಯತೆಗಳು' ಎಂಬ ವಿಷಯದ ಬಗ್ಗೆ ವಿಶೇಷೋಪನ್ಯಾಸ ನೀಡುವರು. ಹೊಳೆನರಸೀಪುರ ಮಹಿಳಾ ಸರಕಾರಿ ಗೃಹ ವಿಜ್ಞಾನ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತೀ ದೇವಿ ಪಿ ಅವರು 'ಪಕ್ಕಿಹಳ್ಳದ ಹಾದಿಗುಂಟ' ಕೃತಿ ಪರಿಚಯ ಮಾಡುವರು. ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ಎ.ಎಲ್. ಅನಂತಪದ್ಮನಾಭ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಅನುಪಮಾ ಪ್ರಸಾದ್, ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಶುಭಾಶಂಸನೆ ಮಾಡುವರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತಾ ಎಸ್, ಅಪೂರ್ವ ಕಲಾವಿದರು ಅಧ್ಯಕ್ಷ ಉಮೇಶ್ ಎಂ ಸಾಲಿಯಾನ್, ಕಾರ್ಯದರ್ಶಿ ಡಾ. ರತ್ನಾಕರ ಮಲ್ಲಮೂಲೆ, ಸಹಾಯಕ ಪ್ರಾಧ್ಯಾಪಕ ಡಾ. ರಾಧಾಕೃಷ್ಣ ಬೆಳ್ಳೂರು ಉಪಸ್ಥಿತರಿರುವರು.
ಮಧಾಹ್ನ ಅಭಿಜಾತ ಕನ್ನಡ - ಕಾವ್ಯವಾಚನ ಮತ್ತು ವ್ಯಾಖ್ಯಾನ ನಡೆಯಲಿದೆ. ತಲಪಾಡಿ ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ಉಪನ್ಯಾಸಕ ಸುರೇಶ್ ರಾವ್ ಅತ್ತೂರ್ ಹಾಗೂ ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಥಮ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿನಿ ಶ್ರದ್ಧಾ ಭಟ್ ನಾಯರ್ಪಳ್ಳ ವಾಚನ - ವ್ಯಾಖ್ಯಾನ ನಡೆಸಿಕೊಡುವರು.