ಬದಿಯಡ್ಕ: ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಸಭೆಯು ಭಾನುವಾರ ಜರಗಿತು. ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ. ನರೇಶ್ ರೈ, ಕಾರ್ಯಾಧ್ಯಕ್ಷ ಶಾಮ್ ಭಟ್ ಏವುಂಜೆ, ಗೌರವ ಕಾರ್ಯದರ್ಶಿ ಮಹೇಶ ಭಟ್, ಕಾರ್ಯದರ್ಶಿ ಸುಂದರ ಶೆಟ್ಟಿ, ಕೋಶಾಧಿಕಾರಿ ಸುರೇಶ ಏವುಂಜೆ, ಮೊಕ್ತೇಸರ ಗೌರೀಶಂಕರ ರೈ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಮಹಿಳಾ ಸಮಿತಿಯ ಮೈನಾಜಿ ರೈ ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು. 2020 ಮಾರ್ಚ್ 20ರಿಂದ ಪ್ರಾರಂಭವಾಗಲಿರುವ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ನಡೆಸಲುದ್ದೇಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಮಹೇಶ ಭಟ್ ಸ್ವಾಗತಿಸಿ, ಸುಂದರ ಶೆಟ್ಟಿ ವಂದಿಸಿದರು.
ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಆಹ್ವಾನ :
ಕುಕ್ಕಂಗೋಡ್ಲು ಶ್ರೀಕಂಠಪ್ಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವವು 2020 ಮಾರ್ಚ್ 20ರಿಂದ 28ರ ತನಕ ಜರಗಲಿರುವುದು. ಈ ಸಂದರ್ಭದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಸಂಸ್ಥೆಗಳು ಅಥವಾ ತಂಡಗಳು ಡಿ.15 ಮೊದಲು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ಸಂಚಾರವಾಣಿ ಸಂಖ್ಯೆಗಳು : 9847866153, 9495103241, 9447660467, 9995560844.