ಮಂಜೇಶ್ವರ: ಹದಿನೆಂಟು ಪೇಟೆಗಳ ದೇವಾಲಯವೆಂಬ ಖ್ಯಾತಿಯ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಾಲಯದಲ್ಲಿ ವಾರ್ಷಿಜಕ ಷಷ್ಠಿ ಮಹೋತ್ಸವ ಮಂಗಳವಾರ ಸಂಪನ್ನಗೊಂಡಿತು.
ಮಂಗಳವಾರ ಮಧ್ಯಾಹ್ನ 1.30ಕ್ಕೆ ಅವಭೃತ ಸ್ನಾನ, 2.30ರಿಂದ ಸಂಜೆ 4.30ರ ವರೆಗೆ ಮರದ ಲಾಲ್ಕಿ, ಸಣ್ಣ ರಥೋತ್ಸವಗಳು ನಡೆದವು. ಸಂಜೆ 5ಕ್ಕೆ ಶೇಷ ತೀರ್ಥ ಸ್ನಾನ, 6ಕ್ಕೆ ಧ್ವಜಾವರೋಹಣ, 7ಕ್ಕೆ ಗಡಿಪ್ರಸಾದ ವಿತರಣೆ ನಡೆಯಿತು. ರಾತ್ರಿ 9.30ಕ್ಕೆ ಮಹಾಪೂಜೆ, ಬ್ರಾಹ್ಮಣ ಸಂತರ್ಪಣೆಯೊಂದಿಗೆ ಉತ್ಸವ ಸಂಪನ್ನಗೊಂಡಿತು.