ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ನಂತರ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಇದಕ್ಕೆ ಪೌರತ್ವ ಮಸೂದೆಯಿಂದ ಮೇಘಾಲಯಕ್ಕೆ ವಿನಾಯಿತಿ ಕೋರಿ ಮುಖ್ಯಮಂತ್ರಿ ಕಾರ್ನಾಡ್ ಸಂಗ್ಮಾ ಮತ್ತು ಸಂಪುಟ ಸಚಿವ ದೆಹಲಿಗೆ ದೌಡಾಯಿಸಿದ್ದಾರೆ.
2019ರ ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದ ನಂತರ ಮೇಘಾಲಯದ ರಕ್ಷಣೆಗಾಗಿ ಬಲವಾದ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲು ಕಾನ್ರಾಡ್ ಸಂಗ್ಮಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದರು.
ಏಕೈಕ ಸಂಸದ ಹೊಂದಿರುವ ರಾಷ್ಟ್ರೀಯ ಪೀಪಲ್ಸ್ ಪಾರ್ಟಿಯ ಅಗಾಥಾ ಸಂಗ್ಮಾ ಅವರು ಲೋಕಸಭೆಯಲ್ಲಿ ವಿವಾದಾತ್ಮಕ ಮಸೂದೆಯನ್ನು ಬೆಂಬಲಿಸಿದ್ದರು. ಇದಾದ ನಂತರ ಮೇಘಾಲಯದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಮುಖ್ಯಮಂತ್ರಿಗಳು ಅಮಿತ್ ಶಾ ಅವರನ್ನು ಒತ್ತಾಯಿಸಲಿದ್ದಾರೆ.