HEALTH TIPS

ಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ

 
       ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 50ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ  ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.
     ರಾಷ್ಟ್ರಪತಿ ಭವನದಲ್ಲಿ ನಿನ್ನೆ(ಸೋಮವಾರ) ಸಂಜೆ ನಡೆದ  ಸಮಾರಂಭದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು.  ಅಮಿತಾಬ್ ಬಚ್ಚನ್ ಅವರ ಪತ್ನಿ ಜಯ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಮತ್ತಿತರರು ಈ ಸಂಭ್ರಮಕ್ಕೆ ಕ್ಷಣಕ್ಕೆ ಸಾಕ್ಷಿಯಾದರು.
     ಅನಾರೋಗ್ಯ ಸಮಸ್ಯೆಯಿಂದಾಗಿ ಈ  ಬಾರಿಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಮಿತಾಬ್ ಬಚ್ಚನ್ ಪಾಲ್ಗೊಂಡಿರಲಿಲ್ಲ. ಹಾಗಾಗೀ ನಿನ್ನೆ  ಪ್ರಶಸ್ತಿ ಪ್ರದಾನ ಮಾಡಲಾಯಿತು
      ಭಾರತೀಯ ಚಿತ್ರರಂಗದಲ್ಲಿ ಈ ಮಟ್ಟಕ್ಕೆ ತಮ್ಮನ್ನು ಬೆಳೆಸಿದ ಜನರ ಪ್ರೀತಿ ಹಾಗೂ ಅವರ ಬೆಂಬಲಕ್ಕೆ ಈ ಪ್ರಶಸ್ತಿಯನ್ನು ಆರ್ಪಿಸುವುದಾಗಿ ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ.
Hon'ble @rashtrapatibhvn to present 50th to legendary actor @SrBachchan on @DDNational & Live-Stream on https://www.youtube.com/watch?v=9agNfo9aOdQ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries