ತಿರುಮಲ: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ(ಟಿಟಿಡಿ) ಗಣ್ಯವ್ಯಕ್ತಿಗಳ (ವಿಐಪಿ) ಬ್ರೇಕ್ ದರ್ಶನದ ದರವನ್ನು ಹೆಚ್ಚಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟಪಡಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಸಮುದಾಯಗಳು ಹೆಚ್ಚಿರುವ ಪ್ರದೇಶಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸುವುದು ಶ್ರೀ ವೆಂಕಟೇಶ್ವರ ಆಲಯ ನಿರ್ಮಾಣ (ಶ್ರೀವಾನಿ) ಟ್ರಸ್ಟ್ ನ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ. ಶ್ರೀವಾನಿ ಟ್ರಸ್ಟ್ ಗೆ 10,000 ರೂ ದೇಣಿಗೆಯಾಗಿದೆ. ಆದರೆ, ವಿಐಪಿ ಬ್ರೇಕ್ ದರ್ಶನಕ್ಕೆ ಟಿಕೆಟ್ ದರ 500 ರೂ.ನಷ್ಟಿದೆ ಎಂದು ಸಿಂಘಾಲ್ ಅವರು ಯಾತ್ರಿಕರ ಮಾಸಿಕ ಕಾರ್ಯ ನಿರ್ವಹಣಾಧಿಕಾರಿಗೆ ಕರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಿಳಿಸಿದ್ದಾರೆ.