ಮುಂಬೈ: ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರಿಸ್ ಸಂಸ್ಥೆ, ಸರ್ಕಾರಿ ಸ್ವಾಮ್ಯದ ದೇಶದ ಅತಿ ದೊಡ್ಡ ಕಂಪನಿಯಾಗಿದ್ದ ಇಂಡಿಯನ್ ಆಯಿಲ್ ಕಾಪೆರ್Çೀರೇಶನ್(ಐಒಸಿ) ಅನ್ನು ಹಿಂದಿಕ್ಕುವ ಮೂಲಕ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ.
ಅತಿ ಹೆಚ್ಚು ವಾರ್ಷಿಕ ವಹಿವಾಟು ನಡೆಸಿದ ಫಾರ್ಚೂನ್ ಇಂಡಿಯಾ 500 ಪಟ್ಟಿಯಲ್ಲಿ ಐಒಸಿಯನ್ನು ಹಿಂದಿಕ್ಕಿರುವ ರಿಲಯನ್ಸ್ ಇಂಡಸ್ಟ್ರಿಸ್ ಭಾರತದ ನಂ.1 ಕಂಪನಿಯಾಗಿ ಹೊರಹೊಮ್ಮಿದೆ. 2018-19ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ 5.81 ಲಕ್ಷ ಕೋಟಿ ವಹಿವಾಟು ನಡೆಸಿದ್ದು, ಐಒಸಿಯ ವಾರ್ಷಿಕ ವಹಿವಾಟು 5.36 ಲಕ್ಷ ಕೋಟಿಯಷ್ಟಿದೆ. ಅಲ್ಲದೇ 2019ರ ಆರ್ಥಿಕ ವರ್ಷದಲ್ಲಿ ಅತ್ಯಧಿಕ ಲಾಭಾಂಶ ಗಳಿಸಿದ ಕಂಪನಿ ಎಂಬ ಹೆಗ್ಗಳಿಕೆಗೂ ರಿಲಯನ್ಸ್ ಇಂಡಸ್ಟ್ರಿಸ್ ಪಾತ್ರವಾಗಿದೆ.
ಇತ್ತೀಚಿನವರೆಗೂ ದೇಶದ ನಂಬರ್ 1 ಸಾರ್ವಜನಿಕ ವಲಯದ ಕಂಪನಿ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ಐಒಸಿ, 2018-19ರ ವಿತ್ತೀಯ ವರ್ಷದಲ್ಲಿ ಕುಸಿತ ಕಂಡಿದ್ದು, ಮೊದಲ ಬಾರಿಗೆ ಖಾಸಗಿ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಸ್ಥಾನ ಪಡೆದಿದೆ. ಮತ್ತೊಂದು ಸಾರ್ವಜನಿಕ ವಲಯದ ಸಂಸ್ಥೆಯಾದ ಒಎನ್ ಜಿಸಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟಾಟಾ ಮೊಟಾರ್ಸ್ ಮತ್ತು ಭಾರತ್ ಪೆಟ್ರೋಲಿಯಂ ಕಾಪೆರ್Çೀರೇಷನ್ ನಂತರದ ಸ್ಥಾನದಲ್ಲಿವೆ.