ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲೆ ಮೀಯಪದವಿನಲ್ಲಿ ಶಾಲಾ ವಾರ್ಷಿಕೋತ್ಸ ಇತ್ತೀಚೆಗೆ ನಡೆಯಿತು. ಶಾಲಾ ಸಂಚಾಲಕಿ ರಾಜೇಶ್ವರಿ ಎಸ್.ರಾವ್ ಧ್ವಜಾರೋಹಣಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಉಪ್ಪಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಪಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸಂಚಾಲಕಿ ರಾಜೇಶ್ವರಿ ಎಸ್.ರಾವ್ ಶಾಲಾ ರಕ್ಷಕ ಶಿಕ್‍ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್, ಶಾಲಾ ಮಾತೃಸಂಘದ ಅಧ್ಯಕ್ಷೆ ಕೈರುನ್ನಿಸ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ನಿವೃತ್ತ ಅಧ್ಯಾಪಕರಾದ ಖಾದರ್ ಕೆ.ಎಂ ಹಾಗೂ ರಾಮ ಭಟ್ ಇವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಾರ್ಷಿಕ ವರದಿಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸುಧಕರ ವಿ ವಾಚಿಸಿದರು. ಕಾರ್ಯಕ್ರಮದಲ್ಲಿ ತರಗತಿಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ ರಾವ್ ಆರ್.ಎಂ ಸ್ವಾಗತಿಸಿ ಶಾಲಾ ಸ್ಟಾಫ್ ಸೆಕ್ರೆಟರಿ ರತ್ನಾವತಿ ಟೀಚರ್ ವಂದಿಸಿದರು. ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕಿ ರಾಧಾಮಣಿ ಬಿ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಿದವು.
ಮೀಯಪದವು ವಿದ್ಯಾವರ್ಧಕ ಶಾಲಾ ವಾರ್ಷಿಕೋತ್ಸವ
0
ಜನವರಿ 30, 2020