ಜಕಾರ್ತಾ: ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಬುಧವಾರ ಪ್ರವಾಹ ಉಂಟಾಗಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧಾರಾಕಾರ ಮಳೆಯಿಂದ ದ್ವೀಪದ ಉತ್ತರ ತಪನುಲಿ ಜಿಲ್ಲೆಯಲ್ಲಿ ನದಿಯಲ್ಲಿ ಪ್ರವಾಹ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳನ್ನು ಮುಳುಗಡೆಯಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ಅಗಸ್ ವಿಬೊವೊ ಹೇಳಿದ್ದಾರೆ. ಸೈನಿಕರು, ಪೆÇಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪ್ರವಾಹ ಪೀಡಿತ ಜನರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ನಾಪತ್ತೆಯಾದ ಮೂವರ ಶೋಧಕ್ಕೆ ಕಾರ್ಯಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.