ಬದಿಯಡ್ಕ: ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಗಳ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಶ್ರೀ ನಾಗದೇವರು, ಗುಳಿಗನಕಲ್ಲು, ತ್ರೀನೇತ್ರಕಂಡ ಸಾನಿಧ್ಯಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶವು ಇಂದು(ಜ.31) ಬೆಳಗ್ಗೆ 9.44ರ ಮೀನಲಗ್ನ ಸುಮುಹೂರ್ತದಲ್ಲಿ ಕುಂಟಾರು ಶ್ರೀ ವಾಸುದೇವ ತಂತ್ರಿಯವರ ಸಲಹೆಯಂತೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ಕಾರ್ಮಿಕತ್ವದಲ್ಲಿ ನಡೆಯಲಿರುವುದು. ಅಂದು ಬೆಳಿಗ್ಗೆ 7 ಗಂಟೆಗೆ ಗಣಪತಿಹೋಮ, ಬ್ರಹ್ಮಕಲಶಪೂಜೆ, 9.44ರ ಮೀನಲಗ್ನಸುಮಹೂರ್ತದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭೀಷೇಕ, ಮಹಾಪೂಜೆ, ನಿತ್ಯಮಿತ್ತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಜೀರ್ಣೋದ್ಧಾರ ಸಮಿತಿಯ ವಿಶೇಷ ಮಹಾಸಭೆಯು ನಡೆಯಲಿರುವುದು. ಸದಸ್ಯರೆಲ್ಲರೂ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಲಾಗಿದೆ.
ಇಂದು ಆಲಂಕೂಡ್ಲು ಉಪದೇವತೆಗಳ ಪ್ರತಿಷ್ಠೆ, ಬ್ರಹ್ಮಕಲಶ
0
ಜನವರಿ 30, 2020