ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (ಫೆ.08) ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿದೆ.
ಬೆಳಗ್ಗೆ ಧ್ವಜಾರೋಹಣವನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು. ಅಪರಾಹ್ನ ನಡೆಯುವ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ ರವರು ಉದ್ಘಾಟಿಸುವರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಲ್ಲಾ ಪಂಚಾಯತಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯೆ ಆಶಾಲತ ಬಿ. ಎಂ, ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್, ಮೀಂಜ ಪಂಚಾಯಿತಿ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಕೃಷ್ಣ ಕೊಮ್ಮಂಗಳ, ಸದಸ್ಯೆ ಚಂದ್ರಾವತಿ ವಿ ಪಿ, ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಶಾಲಾ ಹಳೆ ವಿದ್ಯಾರ್ಥಿ ಹಾಗೂ ಮುಂಬೈ ಹೇರಂಬಾ ಇಂಡಸ್ಟ್ರೀಸ್ ನ ಮಾಲಕ ಸದಾಶಿವ ಶೆಟ್ಟಿ ಕನ್ಯಾನ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಮೂಡಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢ ಶಾಲೆಯ ಸಿಬ್ಬಂದಿ ರಾಮ ಕೆ ಕುಳೂರು, ಹಳೆ ವಿದ್ಯಾರ್ಥಿ ಶಕುಂತಳಾ ಶೆಟ್ಟಿ ಪೆÇಯ್ಯೆಲು ಅತಿಥಿಗಳಾಗಿ ಉಪಸ್ಥಿತರಿರುವರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮೀ ದೇರಂಬಳ ಗುತ್ತು, ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಉಪಸ್ಥಿತರಿರುವರು. ಬಳಿಕ ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಬಳಿಕ ಯಶಸ್ವಿ ಕಲಾವಿದರು, ಮಂಜೇಶ್ವರ ಇವರ ಅಭಿನಯದಲ್ಲಿ 'ದೂರ ದೀವೊಡ್ಚಿ' ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ.