ಬದಿಯಡ್ಕ: ಪೆÇಡಿಪಳ್ಳ ಶ್ರೀ ಚೀರುಂಬಾ ಭಗವತಿ ಕ್ಷೇತ್ರದಲ್ಲಿ ಊರಿನ ಜನತೆಯ ಸಮಸ್ತ ದೋಷ ಪರಿಹಾರಾರ್ಥವಾಗಿ, ಕ್ಷೇತ್ರ ಸಾನ್ನಿಧ್ಯ ವೃದ್ಧಿಗಾಗಿ ಬುಧವಾರ 108 ನಾಳೀಕೇರ ಮಹಾಗಣಪತಿ ಹೋಮ ಹಾಗೂ ಮೃತ್ಯುಂಜಯ ಹೋಮ ವಿಜೃಂಭಣೆಯಿಂದ ಜರಗಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಅರವಿಂದ ಅಲೆವೂರಾಯ ನೇರೆಪ್ಪಾಡಿ ಹಾಗೂ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ಜರಗಿದವು. ಬೆಳಗ್ಗೆ ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಮಧ್ಯಾಹ್ನ ಪೂರ್ಣಾಹುತಿ ಜರಗಿತು. ಊರಪರವೂರ ಅನೇಕ ಭಕ್ತಾದಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಪ್ರಸಾದ ವಿತರಣೆ, ಭೋಜನ ಪ್ರಸಾದ ನಡೆಯಿತು.