ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡು ದಿನಗಳ ಭಾರತ ಪ್ರವಾಸದಲ್ಲಿ ಒಂದು ದಿನ ನಿನ್ನೆ ಮುಕ್ತಾಯವಾಗಿದೆ. ಮೊದಲ ದಿನವೇ ಸಬರಮತಿ ಆಶ್ರಮ, ನಮಸ್ತೆ ಟ್ರಂಪ್ ಕಾರ್ಯಕ್ರಮ ಮತ್ತು ತಾಜ್ ಮಹಲ್ ಭೇಟಿ ನೀಡಿ ದೆಹಲಿಗೆ ತೆರಳಿದ ಟ್ರಂಪ್ ಮಂಗಳವಾರ ರಾತ್ರಿ ಅಮೆರಿಕಕ್ಕೆ ಮರಳುವ ಮುನ್ನ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅದರ ವೇಳಾಪಟ್ಟಿ ಈ ಕೆಳಕಂಡಂತಿದೆ.
ಮಂಗಳವಾರ ಬೆಳಗ್ಗೆ 10 ಗಂಟೆ ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ 10:45ಕ್ಕೆ ರಾಜ್?ಘಾಟ್?ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ 11:30ಕ್ಕೆ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೊ?ದಿ ಮತ್ತು ಟ್ರಂಪ್ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಸುದ್ದಿಗೊ?ಷ್ಠಿ ನಡೆಯಲಿದೆ.
ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೆ?ಜಿನ ಸಭೆ ನಡೆಯಲಿದೆ. ಬಳಿಕ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್? ಕೋವಿಂದ್? ಅವರನ್ನು ಟ್ರಂಪ್? ಭೇಟಿ ಮಾಡಲಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟದಲ್ಲಿ ಪಾಲ್ಗೊಂಡ ಬಳಿಕ ರಾತ್ರಿ 10ಕ್ಕೆ ಟ್ರಂಪ್? ಅಮೆರಿಕಗೆ ನಿರ್ಗಮಿಸಲಿದ್ದಾರೆ.