ಉಪ್ಪಳ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಆಶ್ರಯದಲ್ಲಿ ಕಾರ್ಯವೆಸಗುತ್ತಿರುವ ಉಪ್ಪಳದ ಶ್ರೀ ರಾಮಕೃಷ್ಣ ವಿದ್ಯಾಲಯದ 30 ನೇ ವಾರ್ಷಿಕೋತ್ಸವ ಸಮಾರಂಭ ಶಾಲಾ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಜರಗಿತು.
ಸಮಾರಂಭದಲ್ಲಿ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ವಸಂತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.
ಮುಖ್ಯ ಶಿಕ್ಷಕಿ ಕಸ್ತೂರಿ ಎಸ್. ವರದಿ ಮಂಡಿಸಿದರು. ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅಧ್ಯಕ್ಷತೆ ವಹಿಸಿದರು. ಆಡಳಿತ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ವಳಮಲೆ, ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡು, ಪದ್ಮನಾಭ ಭಂಡಾರಿ, ಅರವಿಂದಾಕ್ಷ ಭಂಡಾರಿ, ಬಂಟರ ಸಂಘದ ಜಿಲ್ಲಾ ಕಾರ್ಯದರ್ಶಿ ನ್ಯಾಯವಾದಿ ದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ಕಾರ್ಯಕ್ರಮ ಜರಗಿತು. ಮಾತೃ ಸಂಘದ ಅಧ್ಯಕ್ಷೆ ಶುಭಾ ಎಸ್.ಭಂಡಾರಿ ಸ್ವಾಗತಿಸಿ, ವಂದಿಸಿದರು.