ಪೆರ್ಲ: ಕಾಟುಕುಕ್ಕೆ ಖಂಡೇರಿಯ ಶ್ರೀ ಅಶ್ವತ್ಥಕಟ್ಟೆ ಸೇವಾ ಸಮಿತಿ ಆಶ್ರಯದಲ್ಲಿ ಅಶ್ವತ್ಥಕಟ್ಟೆಯ 8ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಬೆಳಗ್ಗೆ ಶ್ರೀ ಗಣಪತಿ ಹವನ, ಸಂಜೆ ಕಶೆಕೋಡಿ ಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ, ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.
ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಎಣ್ಮಕಜೆ ಗ್ರಾ. ಪಂ.ಸದಸ್ಯೆ ಮಲ್ಲಿಕಾ ಜೆ.ರೈ ಅಧ್ಯಕ್ಷತೆ ವಹಿಸಿದ್ದರು. ಬೆಟ್ಟಂಪಾಡಿ ಶಾಲೆಯ ನಿವೃತ್ತ ಸಂಸ್ಕøತ ಶಿಕ್ಷಕ ಮಂಜಳಗಿರಿ ವೆಂಕಟ್ರಮಣ ಭಟ್ ಧಾರ್ಮಿಕ ಭಾಷಣ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.