HEALTH TIPS

ಟಾಟಾ ಟ್ರಂಪ್- ಎರಡು ದಿನಗಳ ಭಾರತ ಪ್ರವಾಸ ಯಶಸ್ವಿಯಾಗಿ ಮುಗಿಸಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಟ್ರಂಪ್ ದಂಪತಿ


          ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಅವರ ಎರಡು ದಿನಗಳ ಭಾರತ ಪ್ರವಾಸ ಯಶಸ್ವಿಯಾಗಿ ಮುಗಿಯಿತು. ಮಂಗಳವಾರ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಬಳಿಕ ಟ್ರಂಪ್ ದಂಪತಿ ತಮ್ಮ ದೇಶಕ್ಕೆ ಪ್ರಯಾಣ ಬೆಳೆಸಿದರು.
         ಔತಣಕೂಟ ಮುಗಿಸಿ ರಾಷ್ಟ್ರಪತಿ ಭವನದಿಂದ ಸುಮಾರು 10.15ಕ್ಕೆ ಹೊರಬಂದ ಟ್ರಂಪ್, ಪ್ರಧಾನಿ ಮೋದಿಯವರನ್ನು ಒಮ್ಮೆ ತಬ್ಬಿಕೊಂಡು ಧನ್ಯವಾದ ತಿಳಿಸಿದರು. ಬಳಿಕ ರಾಷ್ಟ್ರಪತಿ ರಾಮನಾಥ್? ಕೋವಿಂದ್ ಅವರಿಗೆ ಹಸ್ತಲಾಘವ ಮಾಡಿ, ಅಲ್ಲಿದ್ದ ಗಣ್ಯರತ್ತ ಕೈಬೀಸಿ ತಮ್ಮ ಕಾರನ್ನೇರಿ ವಿಮಾನ ನಿಲ್ದಾಣಕ್ಕೆ ತೆರಳಿದರು. ನಂತರ 10:30ರ ಸುಮಾರಿಗೆ ವಿಮಾನವನ್ನೇರಿ ಅಮೆರಿಕ ಕಡೆಗೆ ಹಾರಿದರು. ಇದಕ್ಕೂ ಮೊದಲು  ಟ್ರಂಪ್ ದಂಪತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪತ್ನಿ ಸವಿತಾ ಕೋವಿಂದ್ ಆತ್ಮೀಯವಾಗಿ ಔತಣಕೂಟಕ್ಕೆ ಬರಮಾಡಿಕೊಂಡರು. ಅಮೆರಿಕ ಅಧ್ಯಕ್ಷರ ಗೌರವಾರ್ಥ ರಾಷ್ಟ್ರಪತಿಗಳು ಔತಣಕೂಟವನ್ನು ಆಯೋಜಿಸಿದ್ದರು. ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಮತ್ತು ಅಳಿಯ ಜರೇದ್ ಕುಶ್ನರ್ ಕೂಡ ಉಪಸ್ಥಿತರಿದ್ದರು. ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಲೋಕಸಭಾ ಸ್ಪೀಕರ್  ಓಂ ಬಿರ್ಲಾ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ತೆಲಂಗಾಣ ಸಿಎಂ ಕೆ. ಚಂದ್ರಶೇಖರ್  ರಾವ್, ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಸೇರಿದಂತೆ ಕೇಂದ್ರದ ಸಚಿವರು ಭಾಗಿಯಾಗಿದ್ದರು. ಅಲ್ಲದೆ, ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್?. ರೆಹಮಾನ್? ಹಾಗೂ ಪ್ರಸಿದ್ಧ ಶೆಫ್ ವಿಕಾಸ್ ಖನ್ನಾ ಕೂಡ ಉಪಸ್ಥಿತರಿದರು. ಟ್ರಂಪ್ ದಂಪತಿ ಔತಣಕೂಟದಲ್ಲಿ ಭಾಗಿಯಾಗಿದ್ದ ಗಣ್ಯರೊಂದಿಗೆ ಹಸ್ತಲಾಘವ ಮಾಡುವುದರೊಂದಿಗೆ ಖುದ್ದಾಗಿ ಪರಿಚಯಿಸಿಕೊಂಡಿದ್ದು ಬಹು ವಿಶೇಷವಾಗಿತ್ತು.
        ಮೊದಲ ದಿನ ಪ್ರವಾಸದ ಝಲಕ್:
     ಎರಡು ದಿನಗಳ ಪ್ರವಾಸ ನಿಮಿತ್ತ ಸೋಮವಾರ ಬೆಳಗ್ಗೆ ಅಹಮದಾಬಾದ್ ಗೆ ಬಂದಿಳಿದ ಟ್ರಂಪ್ ದಂಪತಿ, ಅದ್ಧೂರಿ ರೋಡ್ ಶೋ ಮೂಲಕ ಸಬರಮತಿ ಆಶ್ರಮ ಭೇಟಿ ನೀಡಿದರು. ಬಳಿಕ ವಿಶ್ವದ ಬಹುದೊಡ್ಡ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ "ನಮಸ್ತೆ ಟ್ರಂಪ್" ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಅಹಮದಾಬಾದ್ ನಿಂದ ಆಗ್ರಾಗೆ ತೆರಳಿದ ಟ್ರಂಪ್ ದಂಪತಿ ತಾಜ್ ಮಹಲ್ ವೀಕ್ಷಣೆ ಮಾಡಿದ ನಂತರ ದೆಹಲಿಗೆ ಆಗಮಿಸಿದರು.
        ಎರಡನೇ ದಿನದ ಕಾರ್ಯಕ್ರಮ:
    ಎರಡನೇ ದಿನವಾದ ನಿನ್ನೆ ಬೆಳಗ್ಗೆ ಟ್ರಂಪ್? ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ರಾಜ್ ಘಾಟ್ ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
        ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್ ಭೇಟಿ ನೀಡಿದರು. ಮಧ್ಯಾಹ್ನ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೇಜಿನ ಸಭೆ ನಡೆಯಿತು. ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಟ್ರಂಪ್ ಔತಣಕೂಟದಲ್ಲಿ ಪಾಲ್ಗೊಂಡರು. ಬಳಿಕ ರಾತ್ರಿ 10:30ಕ್ಕೆ ಟ್ರಂಪ್ ದಂಪತಿ ಅಮೆರಿಕಗೆ ಪ್ರಯಾಣ ಬೆಳೆಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries