ಕಲಬುರಗಿ: ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಲಲಾಗಿದೆ.ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿರುವ ನಿರ್ಣಯಗಳು ಹೀಗಿದೆ-
ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯಗೊಳಿಸಬೇಕು.
ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ.
371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು.
ಮಹಾಜನ್ ವರದಿಯೆ ಅಂತಿಮ, ಅದರ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ
ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ.
ಗಡಿ ವಿಷಯದಲ್ಲಿ ಮಹಾರಾಷ್ಟ್ರದ ಉದ್ಧಟತನಕ್ಕೆ ಖಂಡನೆ.
86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನವಾಗಿದ್ದು ಇದೇ ವಷಾರ್ಂತ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಸಮ್ಮೇಳನ ಆಯೋಜಿಸಲು ಗುರುವಾರ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ.