ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಮೀಯಪದವಿನಲ್ಲಿ ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೊರೊನಾ ವೈರಸ್ ಜಾಗೃತಿಯ ಕುರಿತಾಗಿ ವಿಶೇಷ ಎಸೆಂಬ್ಲಿಯು ಜರಗಿತು.
ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಭಾಕರ್ ರೈ ಇವರು ಕೊರೋನಾ ವೈರಸ್ ಹರಡುವ ವಿಧಾನ ಲಕ್ಷಣಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತಾದ ಸವಿವಿರ ಮಾಹಿತಿಗಳನ್ನು ನೀಡಿದರು. ಮೀಂಜ ಪಾಥಮಿಕ ಆರೋಗ್ಯ ಕೇಂದ್ರದ ಇತರ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.