HEALTH TIPS

ಗಾಂಧಿ ಆಶ್ರಮಕ್ಕೆ ಡೊನಾಲ್ಡ್ ಟ್ರಂಪ್ ಭೇಟಿ ಕಾರ್ಯಕ್ರಮ ರದ್ದು?

     
         ಗಾಂಧಿನಗರ: ಅಮೆರಿಕಾದ  ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಆಗ್ರಾಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅಹಾಬಾದಾಬಾದ್ ನಲ್ಲಿ ತಂಗುವ ಅವಧಿ ಕಡಿಮೆಯಾಗುವ ಸಾಧ್ಯತೆ ಇದೆ
        ಸಬರಮತಿಯಲ್ಲಿನ ಗಾಂಧಿ ಆಶ್ರಮಕ್ಕೆ ಡೊನಾಲ್ಡ್ ಭೇಟಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ ಎಂದು ನಂಬಲರ್ಹ ಮಾಹಿತಿಗಳಿಂದ ತಿಳಿದುಬಂದಿದೆ.ಪ್ರಸಿದ್ಧ ಗಾಂಧಿ ಆಶ್ರಮಕ್ಕೆ ಡೊನಾಲ್ಡ್ ಟ್ರಂಪ್ ದಂಪತಿ ಆಗಮನಕ್ಕಾಗಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಆದರೆ, ಗಾಂಧಿ ಆಶ್ರಮಕ್ಕೆ ಟ್ರಂಪ್ ಭೇಟಿ ನೀಡುವ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.ಟ್ರಂಪ್ ದಂಪತಿ  ಗಾಂಧಿ ಆಶ್ರಮದಲ್ಲಿ ಅರ್ಧ ಗಂಟೆಗಳ ಕಾಲ ಕಾಲ ಕಳೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಅದಕ್ಕಾಗಿ ಹೊಸ ಪಾಕಿರ್ಂಗ್ ಸ್ಥಳವನ್ನು ರಚಿಸಲಾಗಿತ್ತು. ಆಶ್ರಮದ ಹಿಂಭಾಗ ವೇದಿಕೆಯೊಂದನ್ನು ಸ್ಥಾಪಿಸಲಾಗಿತ್ತು. ಆಶ್ರಮದಲ್ಲಿ ವಿಶೇಷ ಕೊಠಡಿಯೊಂದನ್ನು ಸಹ ಸಿದ್ಧಪಡಿಸಲಾಗಿತ್ತು. ಆದರೆ, ಇದೀಗ ಈ ಎಲ್ಲಾ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಫೆಬ್ರವರಿ 25 ರಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್ ಅವರಿಗೆ ಭವ್ಯ ಸ್ವಾಗತ ನೀಡಲಾಗುತ್ತದೆ. ನಂತರ ಟ್ರಂಪ್ ದಂಪತಿ ಮಹಾತ್ಮ ಗಾಂಧಿ ಅವರ ಸಮಾಧಿ ಸ್ಥಳ ರಾಜ್ ಘಾಟ್ ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
      ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶಿಂಘ್ಲಾ, ಟ್ರಂಪ್ ಮೊಟೇರಾ ಕ್ರೀಡಾಂಗಣದಲ್ಲಿ ನಮಸ್ತೆ ಟ್ರಂಪ್, ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಷ್ಟೇ ತಿಳಿಸಿದ್ದರು. ಗಾಂಧಿ ಆಶ್ರಮ ಭೇಟಿ ಬಗ್ಗೆ ಉಲ್ಲೇಖಿಸಿರಲಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries