ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದಾರೆ.
ಈ ಹುಚ್ಚಾಟ ನಿಲ್ಲಿಸಿ ಎಂದು ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೇಜ್ರಿವಾಲ್ ಗೆ ಡಿಸಿಎಂ ಮನೀಷ್ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸಾಥ್ ನೀಡಿದ್ದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ಹಿಂಸಾಚಾರ ನಿಲ್ಲಿಸುವುದಕ್ಕೆ ಕಾಳಜಿ ಇದೆ, ಈ ಹಿಂಸಾಚಾರವನ್ನು ನಿಲ್ಲಿಸುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ ಈ ಹುಚ್ಚಾಟ ನಿಲ್ಲಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.