ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಕೆಲವು ಪ್ರದೇಶಗಳಲ್ಲಿ ಹಿಂಸಾಚಾರ ಸೃಷ್ಟಿಸಲಾಗಿರುವಂತೆ ತೋರುತ್ತಿದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.
ದೆಹಲಿ ಪೆÇಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಪೆÇಲೀಸ್ ಕಂಟ್ರೋಲ್ ರೂಮ್ ನಲ್ಲೇ ಇದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ನಡುವೆ ದೆಹಲಿಯಲ್ಲಿ ಹಿಂಸಾಚಾರ ಸೃಷ್ಟಿಯಾಗಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ಎಂದು ಸರ್ಕಾರಿ ಮೂಲಗಳು ಶಂಕೆ ವ್ಯಕ್ತಪಡಿಸಿವೆ.
ದೆಹಲಿಯ ಜಫ್ಹರಾಬಾದ್ ಹಾಗೂ ಮೌಜ್ ಪುರದಲ್ಲಿ ಫೆ.24 ರಂದೂ ಸಹ ಸಿಎಎಗೆ ಸಂಬಂಧಿಸಿದಂತೆ ಘರ್ಷಣೆ ನಡೆದಿದ್ದು, ಮನೆಗಳಿಗೆ, ಅಂಗಡಿಗಳು, ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯಲ್ಲಿ ದೆಹಲಿ ಪೆÇಲೀಸ್ ಮುಖ್ಯ ಪೇದೆ ಸಾವನ್ನಪ್ಪಿದ್ದರೆ, ಪೆÇಲೀಸ್ ಉಪ ಆಯುಕ್ತ ಗಂಭೀರವಾಗಿ ಗಾಯಗೊಂಡಿದ್ದರು.