HEALTH TIPS

ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ

     
       ಪಣಜಿ: ನಕಾರಾತ್ಮಕತೆಯನ್ನು ತ್ಯಜಿಸಿ ಹಿಂಸೆಯನ್ನು ಖಂಡಿಸುವಂತೆ ಯುವಜನತೆಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.
       ನಗರದ ಕಲಾ ಅಕಾಡೆಮಿಯಲ್ಲಿ ಸೋಮವಾರ ಗೋವಾ ವಿಶ್ವವಿದ್ಯಾಲಯದ 32 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ರಚನಾತ್ಮಕ ಮತ್ತು ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಸದ್ಯದ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ರಚನಾತ್ಮಕ ಮತ್ತು ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಿ.ಪ್ರಗತಿಯ ಶಕ್ತಿಗಳೊಂದಿಗೆ ಸೇರ್ಪಡೆಯಾಗಿ. ರಚನಾತ್ಮಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಯುವಜನರ ಶಕ್ತಿ ಬಳಕೆಯಾಗುವುದು ಅಗತ್ಯ. ಯುವಕರಿಗೆ ನನ್ನ ಸಲಹೆ ಏನೆಂದರೆ, ನಕಾರಾತ್ಮಕತೆಯನ್ನು ತ್ಯಜಿಸಿ ಮತ್ತು ಹಿಂಸೆಯನ್ನು ಖಂಡಿಸಬೇಕುಎಂದು ರಾಷ್ಟ್ರಪತಿ ಹೇಳಿದ್ದಾರೆ.ಸಂವಿಧಾನದ ಮಹತ್ವದ ಬಗ್ಗೆ ಜನರು ಮಾತನಾಡುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿದ ನಾಯ್ಡು ಅವರು, ಪ್ರತಿಯೊಬ್ಬ ನಾಗರಿಕರು ಸಂವಿಧಾನವನ್ನು ಅಕ್ಷರಶ: ಅನುಸರಿಸಬೇಕು. ಪ್ರತಿಯೊಂದು ವಲಯದಲ್ಲೂ ಬೆಳವಣಿಗೆ ಸಾಧಿಸಬೇಕು. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಕಾರ್ಯಕ್ರಮಗಳಲ್ಲಿ ಜನರನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
      ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆಯ ಬಗ್ಗೆ ಯೋಚಿಸಬೇಕು. ಕೆಲವು ಪ್ರದೇಶಗಳಲ್ಲಿ ಬೆಳವಣಿಗೆ ಅಗತ್ಯವಿಲ್ಲ. ಸಮಾಜದ ಪ್ರತಿಯೊಂದು ವರ್ಗಗಳು ದೇಶದ ಅಭಿವೃದ್ಧಿ ಮತ್ತು ವೈಭವದಲ್ಲಿ ಪಾಲುದಾರರಾಗಿರಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಸರ್ಕಾರಗಳು ಜನರನ್ನು ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries