ಕಾಸರಗೋಡು: ಪ್ರಬಲ ಭಾಷೆಯೊಂದರ ತುಳಿತಕ್ಕೊಳಗಾಗಿ ದಿನದಿಂದ ದಿನಕ್ಕೆ ಕನ್ನಡಿಗರ ವಲಸೆ ಹೋಗುವ ಪ್ರವೃತ್ತಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಕನ್ನಡಿಗರನ್ನು ಉಳಿಸಿಕೊಳ್ಳಲು ಕನ್ನಡಿಗರಲ್ಲಿ ಧೈರ್ಯ ತುಂಬುವ ಕೆಲಸ ನಡೆಯಬೇಕಾಗಿದೆ ಎಂದು ನ್ಯಾಯವಾದಿ ಸದಾನಂದ ರೈ ಅವರು ಹೇಳಿದರು.
ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ನೇತೃತ್ವದಲ್ಲಿ ತುಳು ವಲ್ರ್ಡ್ ಕಾಸರಗೋಡು ಇದರ ಸಹಯೋಗದಲ್ಲಿ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನದಲ್ಲಿ ಬುಧವಾರ ಸಂಜೆ ಆಯೋಜಿಸಿದ ಜನಪದ ಗಾಯನ ಮತ್ತು ನೃತ್ಯ ಪ್ರದರ್ಶನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಸರಗೋಡಿನಲ್ಲಿ ವಿವಿಧ ಸಮುದಾಯಗಳಿದ್ದು, ಅವುಗಳಿಗೆ ಅದರದ್ದೇ ಆದ ಜನಪದ ಸಂಸ್ಕøತಿ ಇದೆ. ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯವೂ ನಡೆಯಬೇಕಾಗಿದೆ. ಇವುಗಳು ಸಾಧ್ಯವಾಗಬೇಕಾದರೆ ಕನ್ನಡ ಭಾಷಾ ಪ್ರೇಮವನ್ನು ಬೆಳೆಸಬೇಕು. ಕನ್ನಡ ಭಾಷೆ, ಸಂಸ್ಕøತಿಗೆ ಪದೇ ಪದೇ ಎದುರಾಗುತ್ತಿರುವ ಸಮಸ್ಯೆ, ಹೊಡೆಗಳನ್ನು ಮೆಟ್ಟಿನಿಲ್ಲಲು ನಿರಂತರವಾದ ಹೋರಾಟ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದರು.
ಏಪ್ರಿಲ್ ತಿಂಗಳಲ್ಲಿ ಅನಂತಪುರದಲ್ಲಿ ನಡೆಯಲಿರುವ ಕನ್ನಡ ಸಿರಿ ಸಮ್ಮೇಳನದಲ್ಲಿ ಸಾವಿರಾರು ಮಂದಿ ಕನ್ನಡಿಗರು ಭಾಗವಹಿಸಿ ಕನ್ನಡಿಗರ ಶಕ್ತಿ ಪ್ರದರ್ಶನ ನಡೆಯುವ ಮೂಲಕ ಕೇರಳ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಬೇಕಾಗಿದೆ ಎಂದರು.
ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷೆ ಸಾಹಿರತ್ನ ಬಾಲಕೃಷ್ಣ ಅವರು ಸಾಂಪ್ರದಾಯಿಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.
ಅಖಿಲ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ ಅಧ್ಯಕ್ಷ ಜೋಗಿಲ ಸಿದ್ಧರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾಸರಗೋಡಿನ ಕನ್ನಡಿಗರಲ್ಲಿರುವ ಕನ್ನಡ ಬಗೆಗಿನ ಅಚಲವಾದ ಭಾಷಾಭಿಮಾನವನ್ನು ಕಂಡು ಅಚ್ಚರಿಯಾಗಿದೆ ಎಂದರು. ತುಳು ವಲ್ರ್ಡ್ ಕಾಸರಗೋಡು ಇದರ ಪ್ರಧಾನ ಸಂಚಾಲಕ ಡಾ.ರಾಜೇಶ್ ಆಳ್ವ ಉಪಸ್ಥಿತರಿದ್ದರು.
ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಅವರು ಸ್ವಾಗತಿಸಿ, ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಅಖಿಲ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ ಅಧ್ಯಕ್ಷ ಜೋಗಿಲ ಸಿದ್ಧರಾಜು ಹಾಗೂ ಪದ ದೇವರಾಜು ಅವರ ನೇತೃತ್ವದಲ್ಲಿ ಜನಪದ ಗಾಯನ ಮತ್ತು ನೃತ್ಯ ವೈವಿಧ್ಯ ಪ್ರದರ್ಶನಗೊಂಡಿತು.