ಮಂಜೇಶ್ವರ: ಮೀಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ನವೀಕರಣ ಕಾರ್ಯಗಳು ಭರದಿಂದ ಸಾಗಿದ್ದು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ಭವ್ಯ ಮಂದಿರ ನಿರ್ಮಾಣಗೊಳ್ಳಲಿದೆ. ಆ ಬಗ್ಗೆ ಶ್ರೀ ಅಯ್ಯಪ್ಪ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯವು ಬ್ರಹ್ಮಶ್ರೀ ಗೋವಿಂದ ಭಟ್ ಪೆÇಳ್ಳಕಜೆ ಅವರ ದಿವ್ಯ ಹಸ್ತದಿಂದ ಇತ್ತೀಚೆಗೆ ಜರಗಿತು.
ಸಮಾರಂಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪಳ್ಳತ್ತಡ್ಕ, ಕಾರ್ಯದರ್ಶಿ ಸದಾನಂದ ರೈ ಕಳ್ಳಿಗೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಆರ್.ಎಂ, ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಾ ಸಿ.ನಾಯಕ್ ಮೀಯಪದವು, ರಂಜಿತ್ ಗುರುಸ್ವಾಮಿ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.