ಮಂಜೇಶ್ವರ: ಉದ್ಯಾವರ ಗೇಟ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಕಲಿಕೋತ್ಸವ ಮಂಗಳವಾರ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಶಿಕ್ಷಕಿ ಆಶಲತಾ ಕೆ ಅವರು ಕಲಿಕೋತ್ಸವದ ಪ್ರಾಧಾನ್ಯತೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರತಿಯೊಂದು ತರಗತಿಯ ಪುಟಾಣಿಗಳಿಂದ ವಿವಿಧ ಕಲಿಕಾ ಚಟುವಟಿಕೆಗಳ ಪ್ರದರ್ಶನ ನಡೆಯಿತು.