ಕುಂಬಳೆ: ಕಣ್ಣೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗ, ಯಕ್ಷಗಾನ ಸಂಶೋಧನ ಕೇಂದ್ರ, ಸರ್ಕಾರಿ ಕಾಲೇಜು ಕಾಸರಗೋಡು ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಇದರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 13 ಮತ್ತು 14 ರಂದು ಪಾರ್ತಿಸುಬ್ಬ ಬದುಕು ಬರಹ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವು ಕಾಸರಗೋಡು ವಿದ್ಯಾನಗರದಲ್ಲಿರುವ ಕಣ್ಣೂರು ವಿಶ್ವವಿದ್ಯಾಲಯದ ಕನ್ನಡ ಸಭಾಂಗಣದಲ್ಲಿ ನಡೆಯಲಿರುವುದು. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಎ. ಸುಬ್ಬಣ್ಣ ರೈ ಇತ್ತೀಚೆಗೆ ಬಿಡುಗಡೆ ಗೊಳಿಸಿದರು.
ಕಣ್ಣೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗ ನಿರ್ದೇಶಕ ಡಾ ರಾಜೇಶ್ ಬೆಜ್ಜಂಗಳ , ಕಾಸರಗೋಡು ಸರ್ಕಾರಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಸುಜಾತ ಎಸ್, ನಿವೃತ್ತ ಪ್ರಾಧ್ಯಾಪಕ ಡಾ.ಯು. ಮಹೇಶ್ವರಿ ಹಾಗೂ ಕಾಸರಗೋಡು ಸರ್ಕಾರಿ ಕಾಲೇಜು ಯಕ್ಷಗಾನ ಸಂಶೋಧನಾ ಕೇಂದ್ರ ಸಂಯೋಜಕ ರಾದ ಡಾ ರತ್ನಾಕರ ಮಲ್ಲಮೂಲೆ ಉಪಸ್ಥಿತರಿದ್ದರು.