ಕಾಸರಗೋಡು: ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ನೇತೃತ್ವದಲ್ಲಿ ತುಳು ವಲ್ರ್ಡ್ ಕಾಸರಗೋಡು ಇದರ ಸಹಯೋಗದಲ್ಲಿ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನದಲ್ಲಿ ಫೆ.19 ರಂದು ಸಂಜೆ 5 ರಿಂದ ಜನಪದ ಗಾಯನ ಮತ್ತು ನೃತ್ಯ ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷೆ ಸಾಹಿರತ್ನ ಬಾಲಕೃಷ್ಣ ಅವರು ಉದ್ಘಾಟಿಸುವರು. ನ್ಯಾಯವಾದಿ ಸದಾನಂದ ರೈ ಅಧ್ಯಕ್ಷತೆ ವಹಿಸುವರು. ಅಖಿಲ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ ಅಧ್ಯಕ್ಷ ಜೋಗಿಲ ಸಿದ್ಧರಾಜು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು, ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಉಪಸ್ಥಿತರಿರುವರು.