ನವದೆಹಲಿ: ಉದರ ಸಂಬಂಧಿ ಸೋಂಕಿನಿಂದಾಗಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಉದರ ಸಂಬಂಧಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿರವಾಗಿತ್ತು ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥ ಡಾ. ಡಿ.ಎಸ್. ರತ್ನ ತಿಳಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಕೇಂದ್ರ ಮುಂಗಡ ಪತ್ರ ಮಂಡನೆ ಸಂದರ್ಭದಲ್ಲೂ ಸೋನಿಯಾ ಗಾಂಧಿ ಸಂಸತ್ತಿನಲ್ಲಿ ಪಾಲ್ಗೊಂಡಿರಲಿಲ್ಲ.