HEALTH TIPS

ದೆಹಲಿಯಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ


       ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಬೆಂಬಲಿಸಿ ದೆಹಲಿಯ ಮೌಜ್ ಪುರ್ ಪ್ರದೇಶದಲ್ಲಿ ನಿನ್ನೆ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ನಿಯಂತ್ರಿಸಲು ಪೆÇಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
        ದೆಹಲಿಯ ಜಫರಾಬಾದ್ ಬಳಿ ಸಿಎಎ ವಿರೋಧಿಸಿ ಸಾಕಷ್ಟು ಸಂಖ್ಯೆಯಲ್ಲಿ ಧರಣಿ ನಡೆಸುತ್ತಿದ್ದರು.  ಜಫರಾಬಾದ್ ಬಳಿಯೇ ಮೌಜ್ ಪುರ ಇರುವುದರಿಂದ ಏಕಕಾಲಕ್ಕೆ ಎರಡು ಗುಂಪುಗಳು ಒಂದೆಡೆ ಸೇರಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿತ ಮತ್ತು ಸಿಎಎ ವಿರೋಧಿಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಮೊದಲಿಗೆ ಪೆÇಲೀಸರು ಕಡಿಮೆ ಸಂಖ್ಯೆಯಲ್ಲಿ ಇದ್ದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಆಶ್ರುವಾಯು ಪ್ರಯೋಗಿಸಿ ಸದ್ಯಕ್ಕೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
     ದೆಹಲಿಯ ಮೆಟ್ರೋ ಸ್ಟೇಷನ್ ಗಳನ್ನು ಬಂದ್ ಮಾಡಿದ್ದು ಪ್ರತಿಭಟನಾಕಾರರನ್ನು ಪೆÇಲೀಸರು ಚದುರಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries