ಕಾಸರಗೋಡು: ಬಿಜೆಪಿಯ ಚಟುವಟಿಕೆಯನ್ನು ಮತ್ತಷ್ಟು ಸಕ್ರಿಯಗೊಳಿಸುವುದರ ಜತೆಗೆ ಪಕ್ಷವನ್ನು ಜಿಲ್ಲೆಯಲ್ಲಿ ಮುಂಚೂಣಿಗೆ ತರಲು ಎಲ್ಲ ರೀತಿಯಲ್ಲಿ ಪರಯತ್ನಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ವಕೀಲ ಕೆ.ಶ್ರೀಕಾಂತ್ ತಿಳಿಸಿದ್ದಾರೆ.
ಪಕ್ಷ ವಹಿಸಿಕೊಟ್ಟಿರುವ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು. ಇದಕ್ಕಾಗಿ ಪಕ್ಷದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜತೆಗೆ ಅವರ ಬೆಂಬಲ ಯಾಚಿಸುವುದಾಗಿ ತಿಳಿಸಿದರು.ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಬಾಕಿ ಉಳಿದುಕೊಂಡಿದೆ. ಜನರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕುಡಿಯುವ ನೀರು ಸಹಿತ ಮೂಲ ಸೌಕರ್ಯ ವೃದ್ಧಿಗೆ ಸರ್ಕಾರ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಜನರಮಧ್ಯೆ ದ್ವೇಷದ ವಾತಾವರಣ ಮೂಡಿಸಿ ಅವರ ಮಧ್ಯೆ ಆಂತರಿಕ ಭಿನ್ನಾಭಿಪ್ರಾಯ ಮೂಡುವಂತೆ ಮಾಡಲಾಗುತ್ತಿದೆ. ಜನತೆ ಬದಲಾವಣೆ ಬಯಸುತ್ತಿದ್ದು, ಇದಕ್ಕೆ ಪೂರಕ ವಾತಾವರಣ ಸೃಷ್ಟಿಸಲು ಬಿಜೆಪಿ ಸಿದ್ಧತೆ ನಡೆಸಲಿರುವುದಾಗಿ ತಿಳಿಸಿದರು.