ಕುಂಬಳೆ: ರಾಷ್ಟ್ರೀಯ ಕನ್ನಡ ಪರಿಷತ್ತು ಕಾಸರಗೋಡು ಇದರ ಆಶ್ರಯದಲ್ಲಿ ಏಪ್ರಿಲ್ 10, 11 ಮತ್ತು 12 ರಂದು ಸರೋವರ ದೇವಾಲಯ ಅನಂತಪುರ ಪರಿಸರದಲ್ಲಿ ನಡೆಯಲಿರುವ ಬೃಹತ್ ರಾಷ್ಟ್ರೀಯ ಕನ್ನಡ ಸಿರಿ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ ಮತ್ತು ಸಮಾಲೋಚನಾ ಸಭೆ ಕುಂಬಳೆ ಮಾಧವ ಪೈ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸಮಾಲೋಚನಾ ಸಭೆಯನ್ನು ಅಖಿಲ ಭಾರತ ಬುಡಕಟ್ಟು ಜಾನಪದ ಪರಿಷತ್ತಿನ ಕಾರ್ಯದರ್ಶಿ, ಅಖಿಲ ಕರ್ನಾಟಕ ಜಾನಪದ ಒಕ್ಕೂಟದ ಅಧ್ಯಕ್ಷ ಜೋಗಿಲ ಸಿದ್ದರಾಜು ದೀಪ ಬೆಳಗಿಸಿ, ಸಿರಿ ಸಮ್ಮೇಳನದ ಕಾರ್ಯಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು. ಭಾಷೆ, ಸಂಸ್ಕøತಿಗಳ ನೆಲಮೂಲದ ಸತ್ವವನ್ನು ಕಾಪಿಡುವಲ್ಲಿ ತಳಮಟ್ಟದಿಂದ ಜವಾಬ್ದಾರಿಯುತರಾಗಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸುವ ಅಗತ್ಯದ ಬಗ್ಗೆ ಮಾತನಾಡಿದ ಅವರು ಹಿರಿಯರ ಮಾರ್ಗದರ್ಶನದೊಂದಿಗೆ ಆಶಾವಾದಿಗಳಾಗಿ ಸಂಸ್ಕøತಿ ಸಂವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆನೀಡಿದರು.
ಕನ್ನಡ ಹೋರಾಟ ಸಮಿತಿ ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್ ಎಂ.ವಿ. ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ.ಭಟ್, ಜಿಲ್ಲಾ ಪಂಚಾಯತಿ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಸಾಮಾಜಿಕ ಕಾರ್ಯಕರ್ತ ಗೋಪಾಲ ಶೆಟ್ಟಿ ಅರಿಬೈಲು, ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪ್ರಾಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿ ನಿರೂಪಿಸಿದರು. ಡಾ.ರಾಜೇಶ್ ಆಳ್ವ ಬದಿಯಡ್ಕ ವಂದಿಸಿದರು.ವಿವಿಧ ವಲಯಗಳ ಪ್ರಮುಖರು, ಕನ್ನಡ ಯುವ ಪ್ರೇಮಿಗಳು ಉಪಸ್ಥಿತರಿದ್ದರು.