ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಗೋಸಾಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರದಲ್ಲಿರುವ ಪುರಾತನ ತುಳು ಶಿಲಾಶಾಸನವನ್ನು ವೀಕ್ಷಿಸಿ ತಮ್ಮ ಮೊಬೈಲ್‍ನಲ್ಲಿ ಚಿತ್ರವನ್ನು ಸೆರೆಹಿಡಿದರು.