ಕುಂಬಳೆ: ಕೆನರ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ ಮಂಗಳೂರು ಮತ್ತು ಸಿ.ಇ.ಐ. ಸಂಸ್ಧೆಗಳ ಜಂಟಿ ಆಶ್ರಯದಲ್ಲಿ ಸೂರಂಬೈಲು ಶಾಲಾ ವಿದ್ಯಾರ್ಥಿಗಳಿಗೆ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಎಂಬ ವಿಷಯದಲ್ಲಿ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ ಅವರು ಉದ್ಘಾಟಿಸಿ ಪ್ರಕೃತಿ ದೇವರ ವರ. ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ನಮಗೆ ಸಾಧ್ಯವಿರುವಷ್ಟು ನಮ್ಮ ಪ್ರಕೃತಿಯನ್ನು ಸಂರಕ್ಷಣೆ ಮಾಡೋಣವೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಿ.ಒ.ಡಿ.ಪಿ. ಸಂಸ್ಥೆಯ ಸಂಯೋಜಕರಾದ ಪೀಟರ್ ಪೌಲ್ ಅವರು ತರಬೇತಿಯ ಉದ್ದೇಶವನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಿ.ಒ.ಡಿ.ಪಿ. ಸಂಸ್ಥೆಯ ಸಂಯೋಜಕ ರವಿ ಕುಮಾರ್ ಕ್ರಾಸ್ತ ಅವರು ನೈಸರ್ಗಿಕ ಸಂಪನ್ಮೂಲಗಳು ಎಂದರೇನು? ಪ್ರಕೃತಿ ಮನುಷ್ಯನ ಸ್ವಾರ್ಥಕ್ಕಾಗಿ ಹೇಗೆ ಶೋಷಣೆಯಾಗುತ್ತಿದೆ, ನಾವು ವಿದ್ಯಾರ್ಥಿಗಳಾಗಿ ಪ್ರಕೃತಿಯನ್ನು ಹೇಗೆ ಸಂರಕ್ಷಣೆ ಮಾಡಬಹುದೆಂಬುದರ ಕುರಿತು ಸವಿಸ್ತಾರ ಮಾಹಿತಿಯನ್ನು ನೀಡಿದರು ಹಾಗೂ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿದರು. ಅಧ್ಯಾಪಕ ಇಬ್ರಾಹಿಂ ವಂದಿಸಿದರು. ಸಿ.ಒ.ಡಿ.ಪಿ ಸಂಸ್ಥೆಯ ವಿಜಯ ಕಾರ್ಯಕ್ರಮ ನಿರೂಪಿಸಿದರು.