ಮುಳ್ಳೇರಿಯ: ಆದೂರು ಸರಕಾರಿ ಹೈಯರ್ ಸೆಕೆಂಡರೀ ಶಾಲೆಯ ಕಲಿಕೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಗುರುವಾರ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಆದೂರು ಸಿಎ ನಗರದಿಂದ ಶಾಲೆಯ ತನಕ ಬ್ಯಾಂಡ್ ಮೇಳದೊಂದಿಗೆ ಡಂಗುರ ಜಾಥಾ ಮೆರವಣಿಗೆ ನಡೆಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಪಟ್ಟಾಂಗ್ ಡಂಗುರ ಜಾಥಾವನ್ನು ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಸರಸ್ವತಿ.ಕೆ, ಪ್ರಾಂಶುಪಾಲ ರಂಜಿತ್, ಎ.ಪಿ.ಎಸ್.ಮುತ್ತುಕೋಯ, ಮಾತೃ ಸಂಘದ ಅಧ್ಯಕ್ಷೆ ಬೀಫಾತಿಮ, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲ ರಂಜಿತ್ ಸ್ವಾಗತಿಸಿದರು. ಸ್ಟಾಫ್ ಕಾರ್ಯದರ್ಶಿ ಶರತ್ ಕುಮಾರ್ ವಂದಿಸಿದರು. ಶಿಕ್ಷಕ ಯೂಸುಫ್.ಕೆ ಕಾರ್ಯಕ್ರಮ ನಿರೂಪಿಸಿದರು.
ಅನಂತರ ಶಾಲೆಯ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಧೀರಜ್ ಕಲಿಕೋತ್ಸವವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ನಾಯಕಿ ಪಹನಾಸ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಹಮ್ಮದ್ ಪಟ್ಟಾಂಗ್, ಮುಖ್ಯ ಶಿಕ್ಷಕಿ ಸರಸ್ವತಿ.ಕೆ, ಮಾತೃ ಸಂಘದ ಅಧ್ಯಕ್ಷೆ ಬೀಫಾತಿಮ, ಎಸ್‍ಪಿಸಿ ಡ್ರಿಲ್ ಇನ್ಸ್‍ಪೆಕ್ಟರ್ ವೇಣುಗೋಪಾಲ್, ನಿವೃತ್ತ ಶಿಕ್ಷಕ ಪ್ರಕಾಶ್ ಉಪಸ್ಥಿತರಿದ್ದರು. ಕಳೆದ ಸಾಲಿನ 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿ ಧೀರಜ್, ಅಹಮ್ಮದ್ ಜುನೈದ್ ಮತ್ತು ಯುಎಸ್‍ಎಸ್ ವಿದ್ಯಾರ್ಥಿ ವೇತನಕ್ಕೆ ಅರ್ಹಳಾದ ದೇವಿಕಾ ಮೋಹನ್ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಲಾ -ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ವಿದ್ಯಾರ್ಥಿನಿ ಆಯಿಶತ್ ಫಾಹಿಮ ಸ್ವಾಗತಿಸಿದಳು. ಅಲನ್ ದೇವ್ ವಂದಿಸಿದರು. ವಿದ್ಯಾರ್ಥಿಗಳಾದ ಶಿವಪ್ರಸಾದ್, ಸನುಷಾ, ಅಸ್ಮೀನ, ಮರ್ಶಾದ್, ರಿಸ್ನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳು ವಿವಿಧ ಕಲಿಕೆಯ ಹಿರಿಮೆಗಳನ್ನು ಪ್ರದರ್ಶಿಸಿದರು.