ಕಾಸರಗೋಡು: ಮಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾಸರಗೋಡು ಸರ್ಕಾರಿ ಕಾಲೇಜು ಜಂಟಿ ವತಿಯಿಂದ ಗಡಿನಾಡ ಉತ್ಸವ ಕಾರ್ಯಕ್ರಮ ಫೆ.26ರಂದು ವಿದ್ಯಾನಗರದ ಕಾಸರಗೋಡು ಸರ್ಕಾರಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಉದ್ಘಾಟಿಸುವರು. ನಿವೃತ್ತ ಪ್ರಾಧ್ಯಾಪಕಿ, ಲೇಖಕಿ ಪೆÇ್ರ.ಭುವನೇಶ್ವರಿ ಹೆಗಡೆ ಆಶಯ ಭಾಷಣ ಮಾಡುವರು. ಕಾಸರಗೋಡು ಸರ್ಕಾರಿ ಕಾಲೇಜು ಪ್ರಾಂಶುಪಾಲ ಡಾ.ಎ.ಎಲ್.ಅನಂತಪದ್ಮನಾಭ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ., ಕಾಸರಗೋಡು ನಗರಸಭೆ ಸದಸ್ಯೆ ಸವಿತಾ ಟೀಚರ್, ಕಾಸರಗೋಡು ಸರಕಾರಿ ಕಾಲೇಜು ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ಅಬ್ದುಲ್ ಖಾದರ್ ಬಿ.ಎಚ್., ಕನ್ನಡ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಸುಜಾತಾ ಎಸ್., ಕಾಲೇಜು ಉಪಪ್ರಾಂಶುಪಾಲೆ ರಮಾ, ಕಣ್ಣೂರು ವಿವಿ ಸೆನೆಟ್ ಸದಸ್ಯರಾದ ವಿಜಯನ್, ರಾಜು ಎಂ.ಸಿ. ಮುಖ್ಯ ಅತಿಥಿಯಾಗಿರುವರು. ನಂತರ ಸಾಂಸ್ಕøತಿಕ ವೈಭವ ಕಾರ್ಯಕ್ರಮ ನಡೆಯಲಿದೆ.