ಪೆರ್ಲ: ಶ್ರೀಶಾರದಾಂಬಾ ವಿದ್ಯಾಸಂಸ್ಥೆ ಶೇಣಿ ಮತ್ತು ಶ್ರೀಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಕೆ.ವಿ.ಜಿ. ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ, ಆಯುರ್ವೇಸ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಳ್ಯ ಇವುಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸಲಹಾ ಶಿಬಿರ ಇಂದು(ಭಾನುವಾರ) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಶೇಣಿ ಶ್ರೀಶಾರದಾಂಬಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಕ್ಯಾಂಪ್ಕೋ ಅಧ್ಯಕ್ಷ, ಶ್ರೀಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಆಡಳಿತ ಟ್ರಸ್ಟಿ ಎಸ್.ಆರ್.ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಶಿಬಿರವನ್ನು ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷೆ ಶಾರದಾ ವೈ ಉದ್ಘಾಟಿಸುವರು. ಗ್ರಾ.ಪಂ.ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ., ಸದಸ್ಯೆ ಪುಷ್ಪ ವಿ., ತಜ್ಞರಾದ ಡಾ.ಭರತ್ ಕುಮಾರ್, ಡಾ.ಲೀಲಾಧರ್ ಡಿ.ವಿ., ಶಾಲಾ ಪ್ರಬಂಧಕ ಸೋಮಶೇಖರ ಜೆ.ಎಸ್., ಪ್ರಾಂಶುಪಾಲೆ ವಿಜಯಲಕ್ಷ್ಮೀ, ಮುಖ್ಯೋಪಾಧ್ಯಾಯ ಶ್ರೀಶ ಕುಮಾರ್ ಎಂ.ಪಿ., ರಾಧಾಕೃಷ್ಣ ನಾಯಕ್ ಜೆ.ಎಸ್., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊೈಯ್ದೀನ್ ಕುಟ್ಟಿ ಎಸ್.ಯು., ವಿಲ್ಸನ್ ಡಿಸೋಜ, ಮಾತೃಸಂಘದ ಅಧ್ಯಕ್ಷೆ ರೇಖಾ ಜ್ಯೋತಿ, ಶಶಿಪ್ರಭಾ, ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರನಾಥ ನಾಯಕ್ ಉಪಸ್ಥಿತರಿರುವರು. ಬಳಿಕ ನಡೆಯುವ ಉಚಿತ ವೈದ್ಯಕೀಯ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ, ಮಕ್ಕಳ ವಿಭಾಗ, ಸ್ತ್ರೀರೋಗ, ಕಿವಿ, ಮೂಗು, ಗಂಡಲು, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ಚಿಕಿತ್ಸೆ, ಶಸ್ತ್ರ ಚಿಕಿತ್ಸಾ ವಿಭಾಗದ ತಜ್ಞರು ರೋಗ ಪರಿಶೀಲನೆ ನಡೆಸಿ ಚಿಕಿತ್ಸೆ ಮಾರ್ಗದರ್ಶನ ನೀಡುವರು. ಸಾರ್ವಜನಿಕರು ಇವುಗಳ ಉಪಯೋಗವನ್ನು ಪಡೆಯಬಹುದೆಮದು ಸಂಘಟಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.