ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಸಿಎಎ ಹಿಂಸಾಚಾರ ಹೆಚ್ಚುತ್ತಿದ್ದಂತೆಯೇ ದೆಹಲಿ ಪೆÇಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ನೀಡಿದ್ದಾರೆ. ಈಶಾನ್ಯ ದೆಹಲಿಯ ಹಲವೆಡೆ ಈ ಆದೇಶ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ನೀಡಲಾಗಿದೆ.
ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.